Friday, August 8, 2014

sampada saalu awareness


ಮೊನ್ನೆ ಯಾವುದೋ ಶೂಟಿಂಗ್ ನ ಕಾರಣಕ್ಕೆ ಕಾರು ತೆಗೆದುಕೊಂಡು ಮಲ್ಲೇಶ್ವರಂನಿಂದ ಹೊರಟಿದ್ದೆ.ಯಶವಂತಪುರದ ಸರ್ಕಲ್ ಹತ್ತಿರ ಒಂದು ಬದಿಯಲ್ಲಿ ನಾನಿದ್ದೆ,ವಾಹನಗಳು ಕಿಕ್ಕಿರಿದು ರಸ್ತೆಯಲ್ಲಿ ನಿಂತಿದ್ದವು.ಮುಂದೆಯೂ ಚಲಿಸಲಾರದ ಹಿಂದೆಯೂ ಹೋಗಲಾರದ ಸ್ತಿತಿ.ಪೋಲಿಸ್ ಪೇದೆಯೊಬ್ಬ ಸುಗಮ ಸಂಚಾರಕ್ಕೆ ಒದ್ದಾಡುತ್ತಿದ್ದ.ಹಿಂದಿನಿನಿದ ಜೋರಾಗಿ ಸೈರನ್ ಮಾಡುತ್ತಾ ಅಂಬುಲೆನ್ಸ್ ದಾರಿಗಾಗಿ ಹಾತೊರಿಯುತ್ತಿತ್ತು.ಆ ಸೈರನ್ ಕೇಳಿದೊಡನೆ ನನ್ನ ಎದೆಯಲ್ಲೂ ಬಡಿತ ಹೆಚ್ಚಾಯ್ತು.ಸಾಯುವ ಜೀವ ಬದುಕಲಿ ಎಂಬ ಆಸೆ ಹೆಚ್ಚಾಯ್ತು.ಪೋಲಿಸ್, ಅಂಬುಲೆನ್ಸ್ ಗೆ ದಾರಿ ಮಾಡಿ ಕೊಡುವ ಪ್ರಯತ್ನ ಮಾಡುತ್ತಿದ್ದು,ಅದರಲ್ಲಿ ಅಸಹಾಯಕನಾದಂತೆ ಕಾಣುತ್ತಿದ್ದ.ಅಲ್ಲಿದ್ದ ಬಹುತೇಕ ಜನ,ಅಂಬುಲೆನ್ಸ್ ಗೆ ದಾರಿ ಬಿಡುವ ಬದಲು ಸಿಕ್ಕ ಸ್ವಲ್ಪ ದಾರಿಯಲ್ಲಿ ತಾವು ನುಗ್ಗಿ ಹೋಗುವ ಪ್ರಯತ್ನದಲ್ಲಿದ್ದರು.ನನ್ನ ಕಾರು ಎಡ ಬಾಗದಲ್ಲಿ ಇದ್ದುದ್ದರಿಂದ ಅಲ್ಲೇ ನಿಲ್ಲಿಸಿ,ಪೋಲಿಸ್ ಗೆ ಸಹಾಯ ಮಾಡೋಣ ಅಂತ ತಿರ್ಮಾನಿಸಿ ಟ್ರಾಫಿಕ್ ಪೋಲಿಸ್ ಕೆಲಸ ಮಾಡಿದೆ.ಹತ್ತು ನಿಮಿಷದಲ್ಲಿ ಅಂಬುಲೆನ್ಸ್ ಸೈರನ್ ಮಾಡುತ್ತಾ ಮುಂದೆ ಹೋಯಿತು.ಅದರಲ್ಲಿದ್ದ ರೋಗಿಯ ಸಂಬಂದಿಕರಿರಬಹುದು.ಹೋಗುತ್ತಿರುವ ಅಂಬುಲೆನ್ಸ್ನಿಂದಲೇ ಕೈ ಮುಗಿದರು.ಅಂಬುಲೆನ್ಸ್ ದೂರ ಹೋದಂತೆ ಸೈರನ್ ಕಡಿಮೆ ಆದಂತೆ ಮನಸ್ಸು ನಿರಾಳವಾಗುತ್ತಿತ್ತು.ಪೋಲಿಸ್ ಕೂಡ ಕಣ್ಣಿನಲ್ಲೇ ಕೃತಜ್ಞತೆ ಅರ್ಪಿಸಿದ.ನನ್ನಪ್ಪಾಜಿ ಯಾವಾಗಲು ಹೇಳುತ್ತಿದ್ದ ಮಾತು ನೆನಪಿಗೆ ಬಂತು."ಇನ್ನೊಬ್ಬರಿಗೆ ಸಹಾಯ ಮಾಡುವುದರಲ್ಲಿ ಆತ್ಮ ಸಂತೋಷವಿದೆ".ಎಂದದ್ದು.
ಥ್ಯಾಂಕ್ಸ್ ಅಪ್ಪ ಬದುಕನ್ನು ಕಲಿಸಿದ್ದಕ್ಕೆ.

ನಮಗೆ ಎಷ್ಟೇ ಗಡಿಬಿಡಿ ಇರಲಿ.ಅಂಬುಲೆನ್ಸ್,ಅಗ್ನಿಶಾಮಕದ ವಾಹನ ಬಂದಾಗ ದಯವಿಟ್ಟು ಅವರು ಮುಂದೆ ಚಲಿಸಲು ಅವಕಾಶ ಮಾಡಿಕೊಡಿ,ಸಾದ್ಯವಾದರೆ ಅವರಿಗೆ ಸಹಾಯ ಮಾಡಿ.
"ಹೋಗುವ ಜೀವ ಬದುಕಲಿ,ಆ ರೋಗಿಯ ಕುಟುಂಬದವರ ಆತಂಕ ಕಡಿಮೆ ಆಗಲಿ,".

# ಓದಿ ಸಂಪದ ಸಾಲು.
"ಬದಲಾವಣೆ ಬರಲಿ,ಪರಿವರ್ತನೆ ತರಲಿ.ಇದು ಸಂಪದ ಸಾಲು ಪತ್ರಿಕಾ ಅಭಿಯಾನ."

No comments:

Daily News and News Analysis (ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ )

ರಾಷ್ಟ್ರ,ಅಂತರಾಷ್ಟ್ರ ಹಾಗು ರಾಜ್ಯದ ದಿನದ ಸುದ್ದಿ ಹಾಗು ಸುದ್ದಿ ವಿಶ್ಲೇಷಣೆ ನಮ್ಮ ಸಂಪದ saalu